Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:23 - ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ “ತುಕಾ ಸಾದ್ಯ್ ಹೊಲ್ಯಾರ್! ವಿಶ್ವಾಸ್ ಹೊತ್ತ್ಯಾ ಮಾನ್ಸಾಕ್ ಸಗ್ಳೆ ಸಾದ್ಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:23
12 ತಿಳಿವುಗಳ ಹೋಲಿಕೆ  

“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.


ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,


ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು.


ಆಗ ಆ ಬಾಲಕನ ತಂದೆ, “ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ,” ಎಂದು ಯೇಸುವಿಗೆ ಮೊರೆಯಿಟ್ಟನು.


ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು