Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:24 - ಕನ್ನಡ ಸತ್ಯವೇದವು C.L. Bible (BSI)

24 ಆಗ ಆ ಬಾಲಕನ ತಂದೆ, “ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ,” ಎಂದು ಯೇಸುವಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕೂಡಲೆ ಆ ಹುಡುಗನ ತಂದೆಯು - ನಂಬುತ್ತೇನೆ, ನನಗೆ ನಂಬಿಕೆ ಕಡಿಮೆಯಾಗಿದ್ದರೂ ಸಹಾಯಮಾಡು ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತ್ಯಾ ಪೊರಾಂಚ್ಯಾ ಬಾಬಾನ್ “ಮಾಕಾ ವಿಶ್ವಾಸ್ ಹಾಯ್, ಖರೆ ತೊ ಫಿರೆ ಹೊಯ್ನಾ, ವಿಶ್ವಾಸ್ ಕರುಕ್ ತಿಯಾಚ್ ಮಾಕಾ ಅದಾರ್ ದಿ!” ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:24
21 ತಿಳಿವುಗಳ ಹೋಲಿಕೆ  

“ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II


ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ಪೇತ್ರನು ತನ್ನ ದರ್ಶನವನ್ನು ಕುರಿತು ಇನ್ನೂ ಆಲೋಚಿಸುತ್ತಿರುವಾಗ ಪವಿತ್ರಾತ್ಮ ಅವರು, “ಇಗೋ, ಮೂರು ಜನರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ,


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು