Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:26 - ಕನ್ನಡ ಸತ್ಯವೇದವು C.L. Bible (BSI)

26 ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತ್ಯಾ ಗಿರ್‍ಯಾನ್ ಜೊರಾನಿ ಬೊಬ್ ಮಾರ್‍ಲ್ಯಾನ್ ಅನಿ ತ್ಯಾ ಝಿಲ್ಗ್ಯಾಕ್ ಜಿಮ್ನಿಕ್ ಪಾಡ್ವುನ್, ತಳ್ಮಳಿಸರ್ಕೆ ಕರ್‍ಲ್ಯಾನ್ ಅನಿ ತೆಚಾತ್ನಾ ಭಾಯ್ರ್ ಗೆಲೊ, ತೊ ಝಿಲ್ಗೊ ಹಾಲಿನಸ್ತಾನಾ ಪಡ್ಲೊ. ತನ್ನಾ ಸಗ್ಳ್ಯಾನಿ ತೊ ಮರ್‍ಲೊಚ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:26
8 ತಿಳಿವುಗಳ ಹೋಲಿಕೆ  

ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.


ಜನರೆಲ್ಲರೂ ಆಶ್ಚರ್ಯಚಕಿತರಾದರು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.


ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.


ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಆದರೆ ಯೇಸು ಅವನ ಕೈಹಿಡಿದು ಎತ್ತಲು ಅವನು ಎದ್ದುನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು