Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:29 - ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯೇಸು, “ಈ ಬಗೆಯ ದೆವ್ವವನ್ನು ಹೊರಗಟ್ಟಲು ಪ್ರಾರ್ಥನೆಯೇ ಹೊರತು ಬೇರೆ ಮಾರ್ಗವಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನು - ಈ ಜಾತಿಯು ದೇವರ ಪ್ರಾರ್ಥನೆ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾತರಿಂದಲೂ ಬಿಟ್ಟು ಹೋಗುವದಿಲ್ಲವೆಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ “ತಸ್ಲ್ಯಾಕ್ನಿ ಖಾಲಿ ಮಾಗ್ನಿ ಸೊಡುನ್ ಅನಿ ಕಾಚೆನ್ಬಿ ಭಾಯ್ರ್ ಕಾಡುಕ್ ಹೊಯ್ನಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:29
17 ತಿಳಿವುಗಳ ಹೋಲಿಕೆ  

ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.


ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.


ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು. (ಈ ಬಗೆಯ ದೆವ್ವಗಳನ್ನು ಹೊರಗಟ್ಟಲು ಪ್ರಾರ್ಥನೆ ಮತ್ತು ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ),” ಎಂದರು.


ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.


ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು