Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವಿನ ಬಟ್ಟೆಗಳು ಬಿಳುಪಾಗಿ ಹೊಳೆಯುತ್ತಿದ್ದವು. ಅಷ್ಟು ಬಿಳುಪಾದ ಬಟ್ಟೆಗಳನ್ನು ತಯಾರಿಸಲು ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುಚ್ಯಾ ಅಂಗಾ ವೈಲ್ಯಾ ಫಾಳಿಯಾ ಎವ್ಡ್ಯಾ ಫ್ಹಾಂಡ್ರೆ ಖಡ್ ಹೊಲ್ಲ್ಯಾಕಿ, ಹ್ಯಾ ದುನಿಯಾತ್ ಕೊನ್ಬಿ ಧುವ್ನ್ ತವ್ಡೆ ಫ್ಹಾಂಡ್ರೆ ಕರುಕ್ ಸಾದ್ಯ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:3
13 ತಿಳಿವುಗಳ ಹೋಲಿಕೆ  

ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಸರ್ವಶಕ್ತನು ಅರಸರನತ್ತ ಸದೆಬಡಿದಂತೆ I ಇತ್ತ ಬೀಳುತ್ತಿತ್ತು ಸಾಲ್ಮೋನ್ ಗಿರಿಮೇಲೆ ಹಿಮಗಡ್ಡೆ II


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.


ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು.


ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು