Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:47 - ಕನ್ನಡ ಸತ್ಯವೇದವು C.L. Bible (BSI)

47 ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಡು; ಎರಡು ಕಣ್ಣುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ದೇವರ ರಾಜ್ಯದಲ್ಲಿ ಸೇರುವದು ನಿನಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಅನಿ ತುಜೊ ಡೊಳೊ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಡೊಳೊ ಕಾಡುನ್ ಟಾಕ್, ದೊನ್ ಡೊಳೆ ಥವ್ನ್ ಘೆವ್ನ್ ನರ್ಕಾತ್ ಜಾತಲ್ಯಾನ್ಕಿ ಎಕ್ ಡೊಳೊ ಘೆವ್ನ್ ದೆವಾಚ್ಯಾ ರಾಜ್ಜ್ಯಾಕ್ ಜಾತಲೆ ಕವ್ಡೆಕಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:47
14 ತಿಳಿವುಗಳ ಹೋಲಿಕೆ  

ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.


ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಕುಂಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು