Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಪೇತ್ರನು ಯೇಸುವಿಗೆ - ಗುರುವೇ, ನಾವು ಇಲ್ಲೇ ಇರುವದು ಒಳ್ಳೇದು; ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನಾವು ಇಲ್ಲಿ ಮೂರು ಗುಡಾರಗಳನ್ನು ಹಾಕುತ್ತೇವೆ. ಒಂದು ನಿನಗೆ, ಒಂದು ಮೋಶೆಗೆ ಮತ್ತೊಂದು ಎಲೀಯನಿಗೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಪೆದ್ರುನ್ ಜೆಜುಕ್ “ಗುರುಜಿ! ಅಮಿ ಹಿತ್ತೆ ರ್‍ಹಲ್ಲೆ ಕವ್ಡೆ ಬರೆ ಹಾಯ್ ನ್ಹಯ್! ಹಿತ್ತೆ ಅಮಿ ತಿನ್ ಝೊಪ್ಡಿ ಘಾಲುವಾ, ಎಕ್ ತುಕಾ, ಎಕ್ ಮೊಯ್ಜೆಕ್, ಅನಿ ಎಕ್ ಎಲಿಯಾಕ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:5
15 ತಿಳಿವುಗಳ ಹೋಲಿಕೆ  

ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು.


ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು!


ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು