Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:10 - ಕನ್ನಡ ಸತ್ಯವೇದವು C.L. Bible (BSI)

10 ಈ ವಿಷಯವನ್ನು ಗಾತ್ ಊರಿನವರಿಗೆ ತಿಳಿಸಬೇಡಿ; ಅಳಲೂಬೇಡಿ. ಬೇತ್ಲೆಯಪ್ರದಲ್ಲಿ, ಧೂಳಿನಲ್ಲಿ ಬಿದ್ದು ಹೊರಳಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ, ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಳಲೇಬೇಡಿರಿ; ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದನ್ನು ಗತ್‌ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಬೇತ್ ಒಫ್‌ರಾಹದಲ್ಲಿ ಧೂಳಿನಲ್ಲಿ ಹೊರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:10
7 ತಿಳಿವುಗಳ ಹೋಲಿಕೆ  

ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಮಣ್ಣು ಮುಕ್ಕಬೇಕಾಗಿ ಬಂದರೂ


ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.


ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು