Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:12 - ಕನ್ನಡ ಸತ್ಯವೇದವು C.L. Bible (BSI)

12 ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೇಡು ಯೆಹೋವನಿಂದಿಳಿದು ಯೆರೂಸಲೇವಿುನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವದಿಲ್ಲವೋ ಎಂದು ವೇದನೆಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:12
9 ತಿಳಿವುಗಳ ಹೋಲಿಕೆ  

“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.


ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.


ಅದಕ್ಕೆ ಅವಳು, “ನನ್ನನ್ನು ‘ನವೊಮಿ’ ಎಂದು ಕರೆಯಬೇಡಿ; ‘ಮಾರಾ’ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತ ದೇವರು ನನ್ನನ್ನು ಬಹಳ ದುಃಖಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು