Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:15 - ಕನ್ನಡ ಸತ್ಯವೇದವು C.L. Bible (BSI)

15 ಮಾರೇಷದವರೇ, ಆಕ್ರಮಣಕಾರನೊಬ್ಬನನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಯೇಲಿನ ವೈಭವವು ಅದುಲ್ಲಾಮಿನ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಾಯೇಲಿನ ನಾಯಕರು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು; ಇಸ್ರಾಯೇಲಿನ ಮಹಿಮೆಯವರು ಅದುಲ್ಲಾವಿುಗೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಾರೇಷದ ನಿವಾಸಿಯೇ, ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. ಇಸ್ರಾಯೇಲಿನ ಮಹಿಮೆಯಾದಾತನು ಅದುಲ್ಲಾಮಿನ ಮಟ್ಟಿಗೂ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:15
11 ತಿಳಿವುಗಳ ಹೋಲಿಕೆ  

ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.


ಆಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.


ತಪ್ಪೂಹ, ಏನಾಮ್, ಯರ್ಮೂತ್,


ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್‍ಊರು,


ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ


ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು