Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:4 - ಕನ್ನಡ ಸತ್ಯವೇದವು C.L. Bible (BSI)

4 ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೆಂಕಿಗೆ ಕರಗಿದ ಮೇಣದಂತೆಯೂ ಜರಿಯಲ್ಲಿ ಹೊಯ್ದ ನೀರಿನ ಹಾಗೂ ಪರ್ವತಗಳು ಆತನ ಹೆಜ್ಜೆಗೆ ಕರಗಿ ಹರಿಯುತ್ತವೆ, ತಗ್ಗುಗಳು ಸೀಳಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವುವು; ತಗ್ಗುಗಳು ಸೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:4
12 ತಿಳಿವುಗಳ ಹೋಲಿಕೆ  

ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.


ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.


ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ


ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು