Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:6 - ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:6
19 ತಿಳಿವುಗಳ ಹೋಲಿಕೆ  

ನೀನು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಹೊರಗೆಡಹುವೆನು; ಅದು ಹೀಗೆ ಬಿದ್ದುಹೋಗುವಾಗ ನೀವು ಅದರೊಳಗೆ ಸಿಕ್ಕಿ ನಾಶವಾಗುವಿರಿ; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.’


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ದುರ್ಗದಂತೆ ಎತ್ತರವಾಗಿರುವ ಅದರ ಕೋಟೆಕೊತ್ತಲಗಳನ್ನು ಕೆಳಕ್ಕೆ ಕೆಡವಿ ನೆಲಸಮಮಾಡುವರು. ಅದು ಧೂಳು ಪಾಲಾಗುವುದು.


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ಅವನು ಒಂದು ಪಟ್ಟಣವನ್ನು ಹೊಕ್ಕಿರುವುದು ಆದರೆ ಇಸ್ರಯೇಲರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.


ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.


ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.


ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರಿಯಕ್ಕೆ ವಿರುದ್ಧ ದಂಡೆತ್ತಿಬಂದಿದ್ದನು.


ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದ್ದನು. ಅದು ಅವನಿಗೆ ಇಸ್ರಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಸ್ವಾಧೀನವಾಯಿತು.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು