Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಕ್ಕಾಗಿ ನಾನು ಅರಿಚಾಟ ಕಿರಿಚಾಟ ಮಾಡುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ನಡೆಯುವೆನು; ನರಿಗಳಂತೆ ಅರಚಿಕೊಳ್ಳುವೆನು, ಉಷ್ಟ್ರಪಕ್ಷಿಗಳ ಹಾಗೆ ಕಿರಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:8
19 ತಿಳಿವುಗಳ ಹೋಲಿಕೆ  

“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.


ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.


ಅಡವಿಯ ರಣಹದ್ದಿಗೆ ಸಮನಾದೆ I ಹಾಳುರಿನ ಗೂಗೆಯ ಹಾಗಾದೆ II


ನರಿಗಳಿಗೆ ಸಹೋದರನಾಗಿರುವೆ ಗೂಬೆಗಳಿಗೆ ನಾನು ಗೆಳೆಯನಾಗಿರುವೆ.


ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು.


ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


“ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು