Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:9 - ಕನ್ನಡ ಸತ್ಯವೇದವು C.L. Bible (BSI)

9 ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:9
15 ತಿಳಿವುಗಳ ಹೋಲಿಕೆ  

ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !


ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು