Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:11 - ಕನ್ನಡ ಸತ್ಯವೇದವು C.L. Bible (BSI)

11 “ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:11
35 ತಿಳಿವುಗಳ ಹೋಲಿಕೆ  

ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ನಾನು ಕಪಟ ಮಾರ್ಗದಲಿ ನಡೆದಿದ್ದರೆ ಮೋಸವನ್ನು ಹಿಂಬಾಲಿಸಿ ಓಡಿದ್ದರೆ,


ಗಾಳಿಯಿದೆ, ಮೋಡವಿದೆ, ಆದರೆ ಮಳೆಯಿಲ್ಲ; ಕೊಡದೆಯೆ ತಾನೊಬ್ಬ ದಾನಿಯೆಂದು ಕೊಚ್ಚಿಕೊಳ್ಳುವವನೂ ಹಾಗೆಯೆ.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು