Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:2 - ಕನ್ನಡ ಸತ್ಯವೇದವು C.L. Bible (BSI)

2 ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:2
28 ತಿಳಿವುಗಳ ಹೋಲಿಕೆ  

ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ,


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ನನ್ನ ಭೂಮಿ ನನಗೆ ವಿರುದ್ಧ ಪ್ರತಿಭಟಿಸಿದ್ದರೆ ನೇಗಿಲ ಗೆರೆಗಳೆಲ್ಲ ನನ್ನನು ದೂರಿ ರೋದಿಸಿದ್ದರೆ,


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


“ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.


ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’


ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು