Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಆಹಾ, ಆ ಕೆಡುಕರು] ಪ್ರವಾದನೆ ಮಾಡಬೇಡಿರಿ; ಇಂಥ ವಿಷಯಗಳಲ್ಲಿ ಪ್ರವಾದನೆಯನ್ನೆತ್ತ ಕೂಡದು; ದೂಷಣೆಗಳು ತೊಲಗುವದೇ ಇಲ್ಲ ಎಂದು ಪ್ರವಾದನೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:6
21 ತಿಳಿವುಗಳ ಹೋಲಿಕೆ  

“ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,


ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು