Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:7 - ಕನ್ನಡ ಸತ್ಯವೇದವು C.L. Bible (BSI)

7 ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬ್ ವಂಶವೇ, ಯೆಹೋವನ ಸ್ವಭಾವವು ಹಿಡಿತವಾದದ್ದೋ, ಇಂಥ ಕೃತ್ಯಗಳು ಆತನವೋ ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೇ ಹಿತಕರವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳೆದುಕೊಂಡಿದ್ದಾನೆ. ನೀವು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೆಯ ಸಂಗತಿಗಳನ್ನು ತಿಳಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:7
31 ತಿಳಿವುಗಳ ಹೋಲಿಕೆ  

ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.


ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.


ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.


ಆಗ ಆ ಯೆಹೂದ್ಯರು, ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ.


ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.


ಯಕೋಬನ ಮನೆತನವೇ, ಇಸ್ರಯೇಲ್ ವಂಶದ ಸಕಲ ಗೋತ್ರಗಳೇ, ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿರಿ; ಸರ್ವೇಶ್ವರ ಹೀಗೆನ್ನುತ್ತಾರೆ :


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.


ಜ್ಞಾನವನ್ನು ಸಜ್ಜನರಿಗೆ ಸೇರಿಸಿಡುವನಾತ, ಸನ್ಮಾರ್ಗಿಗಳಿಗೆ ಕವಚವಾಗಿರುವನಾತ.


ಹೇ ಪ್ರಭೂ, ನಿನ್ನ ವಾಗ್ದಾನದ ಪ್ರಕಾರ I ಮಾಡಿದೆ ನಿನ್ನ ದಾಸನಿಗೆ ಮಹೋಪಕಾರ II


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II


ಶುದ್ಧನಿಗಾತ ಪರಿಶುದ್ಧನು I ಮೂರ್ಖನಿಗಾತ ಮಹಾವಕ್ರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು