Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:8 - ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ; ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿಬರುವವರ ಅಂಗಿಯ ಮೇಲಿನಿಂದ ಶಲ್ಯವನ್ನು ಕಸುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನನಗೆ ವೈರಿಯಂತೆ ಎದ್ದುನಿಂತಿರುವ ನನ್ನ ಜನರೇ, ನೀವು ಹಾದುಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:8
10 ತಿಳಿವುಗಳ ಹೋಲಿಕೆ  

ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ನನ್ನ ಸೊತ್ತಾದ ಜನತೆ ನನ್ನ ಪಾಲಿಗೆ ಅರಣ್ಯದ ಸಿಂಹದಂತೆ ನನಗೆದುರಾಗಿ ಅದು ಗರ್ಜಿಸಿದೆ, ಎಂದೇ ಅದನ್ನು ಹಗೆಮಾಡಿರುವೆ.


ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು