Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:11 - ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:11
39 ತಿಳಿವುಗಳ ಹೋಲಿಕೆ  

ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”


ಅವರು ಮದ್ಯಪಾನವನ್ನು ಮಾಡಿದ ನಂತರ ವ್ಯಭಿಚಾರಕ್ಕೆ ಇಳಿಯುತ್ತಾರೆ. ಮಾನಕ್ಕಿಂತ ಅವಮಾನವೇ ಅವರಿಗೆ ಅತಿ ಪ್ರಿಯ.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು.


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.


ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.


“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.


ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.


ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು