ಮೀಕ 3:4 - ಕನ್ನಡ ಸತ್ಯವೇದವು C.L. Bible (BSI)4 ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು. ಅಧ್ಯಾಯವನ್ನು ನೋಡಿ |