Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:6 - ಕನ್ನಡ ಸತ್ಯವೇದವು C.L. Bible (BSI)

6 ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದ್ದರಿಂದ ನಿಮಗೆ ಕತ್ತಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದ್ದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:6
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು