Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:8 - ಕನ್ನಡ ಸತ್ಯವೇದವು C.L. Bible (BSI)

8 ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:8
28 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


“ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ.


“ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -


ಹೇಳಬೇಕಾದವು ನನ್ನಲ್ಲಿ ತುಂಬಿವೆ ಹೇಳಲು ನನ್ನ ಅಂತರಾತ್ಮ ಒತ್ತಾಯಪಡಿಸುತ್ತಿದೆ.


ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.


“ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೇ? ಹಾಗಾದರೆ ಅವರ ದುರಾಚಾರಗಳನ್ನು ಅವರಿಗೆ ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು