ಮೀಕ 4:1 - ಕನ್ನಡ ಸತ್ಯವೇದವು C.L. Bible (BSI)1 ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.