Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:10 - ಕನ್ನಡ ಸತ್ಯವೇದವು C.L. Bible (BSI)

10 ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:10
27 ತಿಳಿವುಗಳ ಹೋಲಿಕೆ  

ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ಬಾಬಿಲೋನಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,’ ಎನ್ನುತ್ತಾರೆ,” ಎಂದು ಹೇಳಿದನು.


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು.


ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’


ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.


ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು