Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ತಮ್ಮ ಯೋಜನೆಯನ್ನು ಹಾಕುತ್ತಾರೆ. ಆದರೆ ಯೆಹೋವನ ಯೋಜನೆಯೇನೆಂದು ಅವರು ಅರಿಯರು. ಯೆಹೋವನು ತನ್ನ ಜನರನ್ನು ಒಂದು ವಿಶೇಷ ಉದ್ದೇಶಕ್ಕಾಗಿ ಇಲ್ಲಿಗೆ ತಂದಿದ್ದಾನೆ. ಆ ಜನರು ಕಣಕ್ಕೆ ಹಾಕಿದ ಸಿವುಡುಗಳಂತೆ ನಜ್ಜುಗುಜ್ಜಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:12
15 ತಿಳಿವುಗಳ ಹೋಲಿಕೆ  

“ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.


ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ.


ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II


ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ಆಗ, ನಿನ್ನ ಮೇಲೆ ಹೋರಾಡಿ, ನಿನಗೂ ನಿನ್ನ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ನಿನ್ನನ್ನು ಬಾಧಿಸುವ ಸಕಲ ಜಾತಿಜನಾಂಗಗಳು ಕನಸಿನಂತೆ, ರಾತ್ರಿಕಾಲದ ಸ್ವಪ್ನದಂತೆ ಮಾಯವಾಗುವುವು.


“ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು