Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:4 - ಕನ್ನಡ ಸತ್ಯವೇದವು C.L. Bible (BSI)

4 ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:4
25 ತಿಳಿವುಗಳ ಹೋಲಿಕೆ  

ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.


ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ I ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ II


ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.


ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು.


ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು