Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:12 - ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು, ನಿನ್ನಲ್ಲಿ ಕಣಿಯವರು ಇನ್ನಿರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಮಾಟಮಂತ್ರಗಳನ್ನು ಇನ್ನು ಮುಂದೆ ಮಾಡದಿರುವೆ. ಭವಿಷ್ಯ ಮತ್ತು ಕಣಿ ಹೇಳುವ ಜನರು ಇನ್ನು ಮುಂದೆ ನಿನ್ನಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:12
14 ತಿಳಿವುಗಳ ಹೋಲಿಕೆ  

ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ.


ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು