Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:2 - ಕನ್ನಡ ಸತ್ಯವೇದವು C.L. Bible (BSI)

2 ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:2
57 ತಿಳಿವುಗಳ ಹೋಲಿಕೆ  

‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ಏಕೆಂದರೆ ನಿಮ್ಮ ತಾಯಿ ರಾಖೇಲಳು, ನಾನು ಮೆಸಪೊಟೇಮಿಯಾದಿಂದ ಬರುವಾಗ, ಕಾನಾನ್ ನಾಡಿನಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನು ಸ್ವಲ್ಪ ದೂರ ಇದ್ದಾಗಲೆ ದಾರಿಯಲ್ಲಿ ಸತ್ತು ನನ್ನನ್ನು ಅಗಲಿಹೋದಳು. ಈಗ ಬೇತ್ಲೆಹೇಮ್ ಎನಿಸಿಕೊಳ್ಳುವ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಆಕೆಯನ್ನು ಸಮಾಧಿಮಾಡಿದೆ,” ಎಂದು ಹೇಳಿದನು.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಮಂಜೂಷವನು ಕುರಿತು ಕೇಳಿದೆವು ಎಫ್ರಾತಾದಲಿ I ನಮಗದು ಕಾಣಬಂದಿತು ಆ ಯಹಾರ್ ಮೈದಾನದಲಿ II


ನೆಟೋಫಾ, ಅಟರೋತ್, ಬೇತ್ಯೋವಾಬ್ ಹಾಗೂ ಮಾನಹತಿಯರ ಎರಡು ಗೋತ್ರಗಳಲ್ಲಿ ಒಂದಾದ ಜೊರ್ಗದ ನಿವಾಸಿಗಳಿಗೆ ಬೆತ್ಲೆಹೇಮ್ ಪಟ್ಟಣದ ಸ್ಥಾಪಕ ಸಲ್ಮನು ಮೂಲಪುರುಷ ಆಗಿದ್ದನು.


ಆದ್ದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಟ್ಟಾದ ಸ್ಥಳಗಳನ್ನು ಗೊತ್ತುಮಾಡಿಕೊಂಡು ಖಚಿತವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ನಾಡಿನಲ್ಲಿ ಇರುವುದಾದರೆ ಯೆಹೂದ ಪ್ರಜೆಗಳ ಮಧ್ಯದಲ್ಲೆಲ್ಲಾ ಹುಡುಕಿ ಅವನನ್ನು ಹಿಡಿಯುವೆನು,” ಎಂದನು.


ಇಲ್ಲಿ ಹತ್ತು ಗಿಣ್ಣಿನ ಉಂಡೆಗಳೂ ಇವೆ. ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು, ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.


ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು