Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:3 - ಕನ್ನಡ ಸತ್ಯವೇದವು C.L. Bible (BSI)

3 ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸ್ತ್ರೀಯು ತನ್ನ ಮಗನನ್ನು ಹೆರುವ ತನಕ ಯೆಹೋವನು ತನ್ನ ಜನರನ್ನು ತೊರೆದುಬಿಡುವನು. ಅನಂತರ ಉಳಿದ ಅವನ ಸಹೋದರರು ಇಸ್ರೇಲ್ ಜನರ ಬಳಿಗೆ ತಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:3
31 ತಿಳಿವುಗಳ ಹೋಲಿಕೆ  

ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು