Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:4 - ಕನ್ನಡ ಸತ್ಯವೇದವು C.L. Bible (BSI)

4 ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:4
37 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.


ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.


ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು