Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:5 - ಕನ್ನಡ ಸತ್ಯವೇದವು C.L. Bible (BSI)

5 ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನೇ, [ನಮಗೆ] ಸಮಾಧಾನಪ್ರದನು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಅರಮನೆಗಳನ್ನು ತುಳಿದುಹಾಕುವಾಗ ನಾವು ಅವರಿಗೆ ವಿರುದ್ಧವಾಗಿ ಏಳು ಮಂದಿ ಪಾಲಕರನ್ನು, ಹೌದು, ಎಂಟು ಮಂದಿ ಪುರುಷಶ್ರೇಷ್ಠರನ್ನು ಏರ್ಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:5
31 ತಿಳಿವುಗಳ ಹೋಲಿಕೆ  

“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.


ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಗಂಭೀರ ಗಮನದ ಮೂರು ಪ್ರಾಣಿಗಳುಂಟು: ಹೌದು ಗಂಭೀರ ಗತಿಯ ನಾಲ್ಕನೆಯ ಪ್ರಾಣಿಯೂ ಉಂಟು:


ನನ್ನ ಅರಿವಿಗೆ ಬಾರದ ಮೂರು ವಿಷಯಗಳಿವೆ: ಹೌದು, ನನ್ನ ಬುದ್ಧಿಗೆ ಎಟುಕದವು ನಾಲ್ಕಿವೆ:


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು