Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:7
40 ತಿಳಿವುಗಳ ಹೋಲಿಕೆ  

ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.


ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?


ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಗಿದ್ಯೋನನು ದೇವರಿಗೆ, “ನೀವು ಹೇಳಿದಂತೆ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೋ ಇಲ್ಲವೋ ಎಂಬುದನ್ನು ತಿಳಿಯಪಡಿಸಿರಿ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.


ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ನೆಲದ ಮೇಲೆ ಇಬ್ಬನಿ ಹೇಗೋ ಹಾಗೆಯೇ ಅವರ ಮೇಲೆ ಎರಗೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.


ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಒಡಂಬಡಿಕೆಯ ದ್ರೋಹಿಗಳು ಅವನ ನಯನುಡಿಗೆ ಮಾರುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು