Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:8 - ಕನ್ನಡ ಸತ್ಯವೇದವು C.L. Bible (BSI)

8 ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:8
29 ತಿಳಿವುಗಳ ಹೋಲಿಕೆ  

ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II


ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II


ಯಾವುದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,


ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.


ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು