Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:9 - ಕನ್ನಡ ಸತ್ಯವೇದವು C.L. Bible (BSI)

9 ಯಕೋಬ ವಂಶಜರೇ, ನಿಮ್ಮ ಎದುರಾಳಿಗಳ ಮೇಲೆ ನಿಮಗೆ ಜಯ ಲಭಿಸಲಿ. ನಿಮ್ಮ ಶತ್ರುಗಳೆಲ್ಲಾ ನಿರ್ಮೂಲವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 [ಯಾಕೋಬೇ,] ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ, ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ನಿನ್ನ ವೈರಿಗಳ ಮೇಲೆ ಕೈ ಎತ್ತಿ ಅವರನ್ನು ನಾಶಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತವಾಗಿರುವುದು. ನಿನ್ನ ಶತ್ರುಗಳೆಲ್ಲರು ನಾಶಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:9
15 ತಿಳಿವುಗಳ ಹೋಲಿಕೆ  

ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಸರ್ವೇಶ್ವರ ಹೀಗೆನ್ನೆತ್ತಾರೆ : “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು.


ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.


ಈ ಕಾರಣ ಆಣೆಯಿಟ್ಟನು ಕೈಯೆತ್ತಿ : I “ಬೀಳಮಾಡುವೆನು ನಿಮ್ಮನು ಅಡವಿಯಲಿ, II


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು