Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:13 - ಕನ್ನಡ ಸತ್ಯವೇದವು C.L. Bible (BSI)

13 ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ, [ಯೆರೂಸಲೇಮೇ,] ನಿನಗೆ ಕ್ರೂರವಾದ ಪೆಟ್ಟುಹಾಕುವೆನು. ನಿನ್ನ ಪಾಪಗಳ ನಿವಿುತ್ತ ನಿನ್ನನ್ನು ಹಾಳುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:13
16 ತಿಳಿವುಗಳ ಹೋಲಿಕೆ  

ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ಆತ ನನಗೆ ದಾರಿ ತಪ್ಪಿಸಿರುವನು ತುಂಡರಿಸಿ ದಿಕ್ಕಿಲ್ಲದವನಂತೆ ಮಾಡಿರುವನು.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು