Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:14 - ಕನ್ನಡ ಸತ್ಯವೇದವು C.L. Bible (BSI)

14 ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಉಂಡರೂ ನಿನಗೆ ತೃಪ್ತಿಯಾಗದು; ಹಸಿವೆಯು ನಿನ್ನೊಳಗೆ ಇದ್ದೇ ಇರುವದು; ನೀನು [ನಿನ್ನವರನ್ನು] ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ; ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:14
15 ತಿಳಿವುಗಳ ಹೋಲಿಕೆ  

ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು. ಎಷ್ಟು ವ್ಯಭಿಚಾರಗೈದರೂ ನಿಮಗೆ ಸಂತಾನ ಪ್ರಾಪ್ತಿಯಾಗದು. ಕಾರಣ, ನೀವು ವೇಶ್ಯಾಚಾರಕ್ಕಾಗಿ ಸರ್ವೇಶ್ವರನನ್ನೇ ತಿರಸ್ಕರಿಸಿದ್ದೀರಿ.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ.


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು