Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:16 - ಕನ್ನಡ ಸತ್ಯವೇದವು C.L. Bible (BSI)

16 “ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:16
31 ತಿಳಿವುಗಳ ಹೋಲಿಕೆ  

‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಪರರು ನಮ್ಮನು ಜರೆಯುವಂತೆ ಮಾಡಿರುವೆ I ನೆರೆಯವರ ಪರಿಹಾಸ್ಯಕ್ಕೆ ಗುರಿಪಡಿಸಿರುವೆ II


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.


ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು.


ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು