Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:4 - ಕನ್ನಡ ಸತ್ಯವೇದವು C.L. Bible (BSI)

4 ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:4
29 ತಿಳಿವುಗಳ ಹೋಲಿಕೆ  

ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಮೋಶೆ ಕೂಷ್ ನಾಡಿನ ಮಹಿಳೆಯೊಬ್ಬಳನ್ನು ಮದುವೆ ಮಾಡಿಕೊಂಡಿದ್ದನು. ಈ ಕಾರಣ ಮಿರ್ಯಾಮಳು ಮತ್ತು ಆರೋನನು ಅವನಿಗೆ ವಿರುದ್ಧ ಮಾತಾಡತೊಡಗಿದರು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.


‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಮೋಶೆ ಮತ್ತು ಆರೋನರ ಮುಂದಾಳತ್ವದಲ್ಲಿ ಈಜಿಪ್ಟ್ ದೇಶದಿಂದ ಸೈನ್ಯ ಸೈನ್ಯವಾಗಿ ಹೊರಟ ಇಸ್ರಯೇಲರ ಪಯಣದ ವಿವರ:


ಆಗ ಸಮುವೇಲನು, “ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತರುವುದಕ್ಕಾಗಿ ಮೋಶೆ ಹಾಗು ಆರೋನರನ್ನು ನೇಮಿಸಿದ ಸರ್ವೇಶ್ವರಸ್ವಾಮಿಯೇ ಇದಕ್ಕೆ ಸಾಕ್ಷಿ: ಇಲ್ಲಿ ನಿಂತುಕೊಳ್ಳಿರಿ:


ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಈಜಿಪ್ಟಿನ ಅರಸ ಫರೋಹನ ಸಂಗಡ ಮಾತಾಡಿದಂಥ ಮೋಶೆ ಮತ್ತು ಆರೋನರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು