Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ, ಯಾವದನ್ನರ್ಪಿಸಿ ಮಹೋನ್ನತದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನೂ ಒಂದು ವರುಷದ ಕರುಗಳನ್ನೂ ತೆಗೆದುಕೊಂಡುಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:6
39 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.


ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.


ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.


ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.


ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.


ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.


ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II


ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ನಾಡಿನ ಜನರಾದರೋ ಹಬ್ಬಗಳಲ್ಲಿ ಸರ್ವೇಶ್ವರನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿಂದ ಆರಾಧಿಸುವುದಕ್ಕೆ ಪ್ರವೇಸಿಸಿದವರು ದಕ್ಷಿಣ ಬಾಗಿಲಿಂದ ಹೊರಡಲಿ; ದಕ್ಷಿಣ ಬಾಗಿಲಿಂದ ಪ್ರವೇಶಿಸಿದವನು ಉತ್ತರ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.


ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು