Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:8 - ಕನ್ನಡ ಸತ್ಯವೇದವು C.L. Bible (BSI)

8 ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:8
66 ತಿಳಿವುಗಳ ಹೋಲಿಕೆ  

ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.


ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II


ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ನಾನು ಮಾಡುವುದನ್ನು ಮನಸ್ಸು ಒಪ್ಪದಿದ್ದರೆ, ಧರ್ಮಶಾಸ್ತ್ರ ಸರಿಯಾದುದೆಂದು ನಾನು ಒಪ್ಪಿಕೊಂಡ ಹಾಗಾಯಿತು.


ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ?


ಕೆಲವು ಮಂದಿ ಆಶೇರ್ಯರು, ಮನಸ್ಸೆಯವರು ಹಾಗು ಜೆಬುಲೂನ್ಯರು ಮಾತ್ರ ದೀನಮನಸ್ಕರಾಗಿ ಜೆರುಸಲೇಮಿಗೆ ಬಂದರು.


ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.


“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.


ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


:ಸತ್ಯಾನುಸಾರ ನ್ಯಾಯತೀರಿಸಿರಿ.


ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು.


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು