Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ದನಿಗೈದು ಪಟ್ಟಣದ ಕಡೆಗೆ ಕೂಗುತ್ತಾನೆ; (ನಿನ್ನ ನಾಮದಲ್ಲಿ ಭಯಭಕ್ತಿಯಿಡುವದು ಸುಜ್ಞಾನವೇ;) [ಬೀಸುವ] ದಂಡಕ್ಕೆ ಕಿವಿಗೊಡಿರಿ, ಅದನ್ನು ನೇವಿುಸಿದವನು ಯಾವನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:9
43 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ನಿನ್ನ ನಾಮದಂತೆ ನಿನ್ನಾ ಹೊಗಳಿಕೆ I ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ I ದೇವಾ, ನೀತಿಭರಿತ ನಿನ್ನ ಆಳ್ವಿಕೆ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


“ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು