Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:1 - ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:1
14 ತಿಳಿವುಗಳ ಹೋಲಿಕೆ  

ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.


ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.


ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ.


ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.


ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?


“ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ್ದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು