Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:10 - ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:10
42 ತಿಳಿವುಗಳ ಹೋಲಿಕೆ  

ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II


ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.


ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.


‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.


“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


ಅನ್ಯಜನರು ನುಡಿಯುವುದೆಂತು : I “ಅವರ ದೇವರೆಲ್ಲಿ?” ಎಂದು II


ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.


ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.


ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು