Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:13 - ಕನ್ನಡ ಸತ್ಯವೇದವು C.L. Bible (BSI)

13 ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ [ಅಷ್ಟರೊಳಗೆ] ಈ ದೇಶವು ತನ್ನ ನಿವಾಸಿಗಳ ನಿವಿುತ್ತ, ಅವರ ದುಷ್ಕೃತ್ಯಗಳಿಗೆ ಫಲವಾಗಿ ಹಾಳುಬಿದ್ದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:13
22 ತಿಳಿವುಗಳ ಹೋಲಿಕೆ  

ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.


ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು.


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ಆ ದಿನದಂದು ನಾಡಿನ ಸುಭದ್ರವಾದ ನಗರಗಳು ನಿರ್ಜನ ಪ್ರದೇಶಗಳಾಗುವುವು. ಇಸ್ರಯೇಲರಿಗೆ ಹೆದರಿ ಅಮೋರ್ಯರು ಮತ್ತು ಹಿವ್ವಿಯರು ಬಿಟ್ಟುಹೋದ ಹಾಳು ನಿವೇಶನಗಳಂತಾಗುವುವು, ನಾಡೆಲ್ಲ ಹಾಳುಬೀಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು