ಮೀಕ 7:14 - ಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ. ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ