Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:17 - ಕನ್ನಡ ಸತ್ಯವೇದವು C.L. Bible (BSI)

17 ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾವಿನಂತೆ ದೂಳನ್ನು ನೆಕ್ಕುವರು; ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು; ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ ಸಮೀಪಿಸಿ ನಿನಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:17
27 ತಿಳಿವುಗಳ ಹೋಲಿಕೆ  

ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II


ಎದೆಗುಂದಿದವರಾದರು ಆ ವಿದೇಶಿಯರು I ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು II


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಮಣ್ಣು ಮುಕ್ಕಬೇಕಾಗಿ ಬಂದರೂ


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ಹೊಗಳುವುವು ನಿನ್ನನ್ನು ಬಲಿಷ್ಟ ರಾಷ್ಟ್ರಗಳು, ನಿನಗಂಜುವುವು ಕ್ರೂರಿಗಳ ಪಟ್ಟಣಗಳು.


ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II


ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಹಿಬ್ರಿಯರು ತಾವು ಅಡಗಿಕೊಂಡಿದ್ದ ಕಿಂಡಿಗಳಿಂದ ಹೊರಗೆ ಬರುತ್ತಲಿದ್ದಾರೆ,” ಎಂದು ತಮ್ಮೊಳಗೆ ಮಾತಾಡಿಕೊಂಡರು.


ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ಎದೆಗುಂದಿದವರಾದರು ಆ ವಿದೇಶಿಯರು ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು.


ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು