ಮೀಕ 7:2 - ಕನ್ನಡ ಸತ್ಯವೇದವು C.L. Bible (BSI)2 ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಅಧ್ಯಾಯವನ್ನು ನೋಡಿ |