Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:3 - ಕನ್ನಡ ಸತ್ಯವೇದವು C.L. Bible (BSI)

3 ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:3
26 ತಿಳಿವುಗಳ ಹೋಲಿಕೆ  

ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


ಅವರು ಮದ್ಯಪಾನವನ್ನು ಮಾಡಿದ ನಂತರ ವ್ಯಭಿಚಾರಕ್ಕೆ ಇಳಿಯುತ್ತಾರೆ. ಮಾನಕ್ಕಿಂತ ಅವಮಾನವೇ ಅವರಿಗೆ ಅತಿ ಪ್ರಿಯ.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.


ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ.


ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.


ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು