Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:7 - ಕನ್ನಡ ಸತ್ಯವೇದವು C.L. Bible (BSI)

7 ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:7
33 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II


ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ನಿನಗಾಗಿ ಪ್ರಭು, ಕಾದಿರುವೆನಯ್ಯಾ I ನನಗಾಗಿ ನೀ ಉತ್ತರಿಸೋ, ದೇವಾ II


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆ ದಿನದಂದು ಜನರು ತಮ್ಮ ಕೈಯಿಂದ ಕಟ್ಟಿದ ಬಲಿಪೀಠಗಳನ್ನಾಗಲೀ, ಬೆರಳುಗಳಿಂದ ನಿರ್ಮಿಸಿದ ಆಶೇರಾ ದೇವತೆಯ ಸ್ತಂಭಗಳನ್ನಾಗಲೀ, ಧೂಪವೇದಿಕೆಗಳನ್ನಾಗಲೀ ಪೂಜಿಸದೆ ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ, ಇಸ್ರಯೇಲಿನ ಪರಮಪಾವನ ಸ್ವಾಮಿಯ ಕಡೆ ತಿರುಗಿಕೊಳ್ಳುವರು.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.


ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ.


“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”


ಆದರೆ ಆಕೆ ದುಷ್ಟಳಾಗಿರದೆ, ನಿರಪರಾಧಿಯಾಗಿದ್ದ ಪಕ್ಷಕ್ಕೆ ಅವಳಿಗೆ ಯಾವ ಹಾನಿಯೂ ಸಂಭವಿಸದೆ ಗರ್ಭವತಿಯಾಗುವಳು.


ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು